Versions
KNV ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
ERVKN ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.
IRVKN ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು. PE