Versions
KNV ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.
ERVKN ಯೆಹೋವನು ಹೇಳುವುದೇನಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.
IRVKN {ಯೆಹೂದದ ಪಾಪಕ್ಕೆ ಆದ ದಂಡನೆ} PS ಯೆಹೋವನು ಇಂತೆನ್ನುತ್ತಾನೆ,
“ಯೆಹೂದವು ಮೂರು ದ್ರೋಹಗಳನ್ನು,
ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ,
ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ.
ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು.
ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ.
ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು,
ಇವರನ್ನು ದಾರಿ ತಪ್ಪುವಂತೆ ಮಾಡಿದವು.