Versions
KNV ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.
ERVKN ಕೂಡಲೆ ಒಂದು ದೊಡ್ಡ ಕಲ್ಲು ಬಂಡೆಯನ್ನು ತಂದು ಆ ಸಿಂಹದ ಗುಹೆಯ ಬಾಯಿಯನ್ನು ಮುಚ್ಚಿದರು. ಅರಸನು ತನ್ನ ಮುದ್ರೆಯುಂಗುರದಿಂದ ಆ ಬಂಡೆಗೆ ಮುದ್ರೆ ಹಾಕಿದನು. ಅರಸನ ಅಧಿಕಾರಗಳ ಮುದ್ರೆಯುಂಗುರಗಳಿಂದಲೂ ಸಹ ಆ ಕಲ್ಲು ಬಂಡೆಗೆ ಮುದ್ರೆ ಹಾಕಲಾಯಿತು. ಇದರಿಂದಾಗಿ ಯಾರೂ ಆ ಕಲ್ಲು ಬಂಡೆಯನ್ನು ಸರಿಸಿ ದಾನಿಯೇಲನನ್ನು ಆ ಸಿಂಹದ ಗುಹೆಯಿಂದ ಹೊರಗೆ ತೆಗೆಯದಂತಾಯಿತು.
IRVKN ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಶಿಕ್ಷೆಯನ್ನು ಯಾರು ಬದಲಾಯಿಸದಂತೆ ರಾಜನ ಮುದ್ರೆಯಿಂದಲೂ, ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮುದ್ರೆಯನ್ನು ಹಾಕಿ ಭದ್ರ ಮಾಡಲಾಯಿತು.