Versions
KNV ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.
ERVKN ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಆ ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಆ ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.”
IRVKN ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು;
ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”