Versions
KNV ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
ERVKN ದೇವರು ಹೇಳುವದೇನೆಂದರೆ: “ನಾನು ಈಜಿಪ್ಟಿನ ಜನರಲ್ಲಿ ಒಳಜಗಳವನ್ನು ಹುಟ್ಟಿಸುವೆನು. ಜನರು ತಮ್ಮ ಸಹೋದರರೊಂದಿಗೆ ಜಗಳವಾಡುವರು. ನೆರೆಹೊರೆಯವರು ಪರಸ್ಪರ ಜಗಳವಾಡುವರು. ನಗರವು ನಗರದೊಂದಿಗೆ ಯುದ್ಧ ಮಾಡುವದು. ಒಂದು ರಾಷ್ಟ್ರವು ಇನ್ನೊಂದು ರಾಷ್ಟ್ರದೊಂದಿಗೆ ಯುದ್ಧಮಾಡುವದು.
IRVKN “ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ,
ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.