Versions
KNV ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು.
ERVKN ಆ ಸಮಯದಲ್ಲಿ ಈಜಿಪ್ಟಿನ ಜನರು ಯೆಹೋವನನ್ನು ನಿಜವಾಗಿಯೂ ಅರಿತುಕೊಳ್ಳುವರು. ಅವರು ದೇವರನ್ನು ಪ್ರೀತಿಸುವರು. ಅವರು ಯೆಹೋವನನ್ನು ಸೇವಿಸಿ ಅನೇಕ ಯಜ್ಞಗಳನ್ನು ಸಮರ್ಪಿಸುವರು. ಯೆಹೋವನಿಗೆ ಹರಕೆ ಹೊತ್ತು ಸಲ್ಲಿಸುವರು.
IRVKN ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.