Versions
KNV ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.
ERVKN ಸೀಸೆರನು ಬರುವುದನ್ನು ಯಾಯೇಲಳು ಕಂಡಳು. ಆದುದರಿಂದ ಅವನನ್ನು ಬರಮಾಡಿಕೊಳ್ಳಲು ಹೊರಗೆ ಬಂದಳು. ಯಾಯೇಲಳು ಸೀಸೆರನಿಗೆ, “ಸ್ವಾಮೀ, ನನ್ನ ಗುಡಾರದೊಳಗೆ ಬನ್ನಿ, ಭಯಪಡಬೇಡಿ” ಎಂದು ಕರೆದಳು. ಆದುದರಿಂದ ಸೀಸೆರನು ಗುಡಾರದೊಳಗೆ ಹೋದನು. ಅವಳು ಸೀಸೆರನ ಮೇಲೆ ಕಂಬಳಿಯನ್ನು ಹೊದಿಸಿದಳು.
IRVKN ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿಗೆ ಬನ್ನಿರಿ” ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು.