Versions
KNV ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ವಿಾಶಾಯೇಲನನ್ನೂ ಎಲ್ಸಾಫಾನನನ್ನೂ ಕರೆದು ಅವರಿಗೆ--ಹತ್ತಿರಕ್ಕೆ ಬಂದು ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತು ಕೊಂಡು ಹೋಗಿರಿ ಅಂದನು.
ERVKN ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅವರ ಹೆಸರು ಮೀಶಾಯೇಲ್ ಮತ್ತು ಎಲ್ಸಾಫಾನ್. ಮೋಶೆಯು ಆ ಪುತ್ರರಿಗೆ, “ಪವಿತ್ರಸ್ಥ್ಧಳದ ಮುಂದೆ ಬಿದ್ದಿರುವ ನಿಮ್ಮ ಸಹೋದರರ ಮೃತಶರೀರಗಳನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿರಿ” ಎಂದು ಹೇಳಿದನು.
IRVKN ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು.