Bible Versions
Bible Books

Leviticus 9:7 (NCV) New Century Version

Versions

KNV   ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.
ERVKN   ಮೋಶೆಯು ಆರೋನನಿಗೆ, “ಯೆಹೋವನು ಆಜ್ಞಾಪಿಸಿದವುಗಳನ್ನು ಮಾಡು. ಯಜ್ಞವೇದಿಕೆಯ ಬಳಿಗೆ ಹೋಗಿ ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಅರ್ಪಿಸು. ನಿನ್ನನ್ನೂ ಜನರನ್ನೂ ಶುದ್ಧಿಮಾಡುವ ಕಾರ್ಯಗಳನ್ನು ಮಾಡು. ಜನರು ತಂದದ್ದನ್ನು ತೆಗೆದುಕೊಂಡು ಅವರಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿ ಅವರನ್ನು ಶುದ್ಧಿಮಾಡು” ಎಂದು ಹೇಳಿದನು.
IRVKN   ಆಗ ಮೋಶೆ ಆರೋನನಿಗೆ, “ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನಗೋಸ್ಕರವೂ ಮತ್ತು ನಿನ್ನ ಜನರಿಗೋಸ್ಕರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us