Versions
KNV ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
ERVKN ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.
IRVKN ಹೇಗೆಂದರೆ ‡ ರೋಮಾ. 5:5; 2 ತಿಮೊ. 2:15 ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ § ರೋಮಾ. 14:8 ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ * 1 ಕೊರಿ 6:20 ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.