Bible Versions
Bible Books

1 Chronicles 11:23 (NET) New English Translation

Versions

KNV   ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು.
ERVKN   ಈಜಿಪ್ಟಿನಲ್ಲಿ ಅತ್ಯಂತ ಎತ್ತರವಾಗಿದ್ದ ಮಹಾಸೈನಿಕನೊಬ್ಬನನ್ನು ಬೆನಾಯನು ಕೊಂದುಹಾಕಿದನು. ಅವನು ಏಳೂವರೆ ಅಡಿ ಎತ್ತರವಾಗಿದ್ದನು. ಅವನ ಕೈಯಲ್ಲಿದ್ದ ಈಟಿಯು ದೊಡ್ಡ ಕಂಬದಂತೆ ಇತ್ತು. ಬೆನಾಯನ ಕೈಯಲ್ಲಿ ಒಂದು ದೊಣ್ಣೆಮಾತ್ರ ಇತ್ತು. ಬೆನಾಯನು ಅವನ ಹತ್ತಿರ ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದಲೇ ಅವನನ್ನು ಸಾಯಿಸಿದನು.
IRVKN   ಮತ್ತೊಮ್ಮೆ ಏಳುವರೆ ಅಡಿ ಎತ್ತರದ ಅತಿ ಬಲವಾದ ಈಟಿಯನ್ನು ಹೊಂದಿದ್ದ ಒಬ್ಬ ಐಗುಪ್ತ್ಯನನ್ನು ಕೊಂದನು. ಐಗುಪ್ತ್ಯನ ಕೈಯಲ್ಲಿದ್ದ ಈಟಿಯು ನೇಕಾರರ ಕುಂಟೆಯಂತಿತ್ತು. ಆದರೆ ಇವನ ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us