Versions
KNV ಆದರೆ ದಾವೀದನು ತನ್ನ ಪಿತೃಗಳ ಸಂಗಡ ಮಲಗಿದ್ದಾನೆಂದೂ ಸೈನ್ಯಾಧಿಪತಿಯಾದ ಯೋವಾಬನು ಸತ್ತುಹೋದನೆಂದೂ ಹದದನು ಐಗುಪ್ತದಲ್ಲಿ ಕೇಳಿ ಫರೋಹನಿಗೆ--ನಾನು ನನ್ನ ದೇಶಕ್ಕೆ ಹೋಗುವ ಹಾಗೆ ನನ್ನನ್ನು ಕಳುಹಿಸು ಅಂದನು.
ERVKN ದಾವೀದನು ಸತ್ತುಹೋದನೆಂಬುದು ಹದದನಿಗೆ ಈಜಿಪ್ಟಿನಲ್ಲಿ ತಿಳಿಯಿತು. ಸೈನ್ಯದ ಸೇನಾಪತಿಯಾದ ಯೋವಾಬನು ಸತ್ತನೆಂಬುದೂ ಅವನಿಗೆ ತಿಳಿಯಿತು. ಆದುದರಿಂದ ಹದದನು ಫರೋಹನಿಗೆ, “ಸ್ವದೇಶದ ನನ್ನ ಮನೆಗೆ ನನಗೆ ಹೋಗಲು ಬಿಡು” ಎಂದು ಹೇಳಿದನು.
IRVKN ದಾವೀದನು ಪೂರ್ವಿಕರ ಬಳಿಗೆ ಸೇರಿದನೆಂದೂ ಸೇನಾಧಿಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನನಿಗೆ, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ, ನನಗೆ ಅಪ್ಪಣೆ ಕೊಡು” ಅಂದನು.