Versions
KNV ಇಪ್ಪತ್ತು ವರುಷಗಳಾದ ತರುವಾಯ ಸೊಲೊಮೋನನು ಆ ಎರಡು ಮನೆಗಳನ್ನು, ಅಂದರೆ ಕರ್ತನ ಮನೆಯನ್ನೂ ಅರಮನೆಯನ್ನೂ ಕಟ್ಟಿಸಿ ತೀರಿಸಿ ದನು. ಆಗ ಸೊಲೊಮೋನನು ಗಲಿಲಾಯ ದೇಶದಲ್ಲಿ ಹೀರಾಮನಿಗೆ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
ERVKN ರಾಜನಾದ ಸೊಲೊಮೋನನು ಇಪ್ಪತ್ತು ವರ್ಷಗಳ ತರುವಾಯ ಗಲಿಲಾಯದ ಇಪ್ಪತ್ತು ಪಟ್ಟಣಗಳನ್ನು ತೂರಿನ ರಾಜನಾದ ಹೀರಾಮನಿಗೆ ಬಿಟ್ಟುಕೊಟ್ಟನು. ಆಲಯವನ್ನು ಮತ್ತು ಅರಮನೆಯನ್ನು ನಿರ್ಮಿಸಲು ಹೀರಾಮನು ಸಹಾಯ ಮಾಡಿದ್ದರಿಂದ ಸೊಲೊಮೋನನು ಹೀರಾಮನಿಗೆ ಈ ಪಟ್ಟಣಗಳನ್ನು ಕೊಟ್ಟನು. ಸೊಲೊಮೋನನು ಅಪೇಕ್ಷಿಸಿದ ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಮತ್ತು ಬಂಗಾರವನ್ನು ಹೀರಾಮನು ಕೊಟ್ಟಿದ್ದನು.
IRVKN ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.