Versions
KNV ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ERVKN ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.