Versions
KNV ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
ERVKN ರಾಜರಾದ ತಾವು ಅಪೇಕ್ಷಿಸಿದರೆ ರಾಜವೃತ್ತಾಂತವನ್ನು ನೀವೇ ಪರಿಶೋಧಿಸಿ. ಜೆರುಸಲೇಮಿನಲ್ಲಿ ಮತ್ತೆ ದೇವಾಲಯವನ್ನು ಕಟ್ಟಲು ರಾಜ ಸೈರಸನು ಆಜ್ಞಾಪಿಸಿದ್ದು ನಿಜವೇ ಎಂಬುದನ್ನು ನೀವೇ ನೋಡಿರಿ. ಆಮೇಲೆ, ಅರಸನೇ, ಇದರ ವಿಚಾರವಾಗಿ ಏನು ತೀರ್ಮಾನ ಮಾಡಿದ್ದೀರೆಂದು ನಮಗೆ ಪತ್ರದ ಮೂಲಕ ತಿಳಿಸಿರಿ.