Versions
KNV ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
ERVKN ಆದರೆ ಗಿಲ್ಯಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಗಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ.
IRVKN ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು;
ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ?
ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.