Versions
KNV ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
ERVKN ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ.