Versions
KNV ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
ERVKN ನಾನು ಏನು ಮಾಡುತ್ತಿದ್ದೇನೆಂದು ಸನ್ಬಲ್ಲಟ್ ಮತ್ತು ಟೋಬೀಯ ಎಂಬವರಿಬ್ಬರು ಕೇಳಿಸಿಕೊಂಡರು. ಇಸ್ರೇಲ್ ಜನರಿಗೆ ಸಹಾಯ ಮಾಡಲು ಬರುತ್ತಿದ್ದಾರೆಂಬ ವಿಷಯವು ಅವರನ್ನು ತಳಮಳಗೊಳಿಸಿತು ಮತ್ತು ಅವರಿಗೆ ಸಿಟ್ಟೂ ಬಂದಿತು. ಸನ್ಬಲ್ಲಟನು ಹೋರೋನಿನವನು ಮತ್ತು ಟೋಬೀಯನು ಅಮ್ಮೋನಿಯ ಅಧಿಕಾರಿಯಾಗಿದ್ದನು.
IRVKN {ನೆಹೆಮೀಯನು ರಾತ್ರಿಯಲ್ಲಿ ಪೌಳಿಗೋಡೆಯನ್ನು ಪರೀಕ್ಷಿಸಿದ್ದು} PS ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.