Versions
KNV ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
ERVKN ನಾನು ಈ ಕಿರುಪತ್ರವನ್ನು ಸಿಲ್ವಾನನ ನೆರವಿನಿಂದ ಬರೆದೆನು. ಅವನು ಕ್ರಿಸ್ತನಲ್ಲಿ ನಂಬಿಗಸ್ತನಾದ ಸಹೋದರನೆಂಬುದು ನನಗೆ ತಿಳಿದಿದೆ. ನಾನು ನಿಮ್ಮನ್ನು ಸಂತೈಸಲು ಮತ್ತು ಪ್ರೋತ್ಸಾಹಿಸಲು ಈ ಪತ್ರವನ್ನು ಬರೆದೆನು. ಇದುವೇ ದೇವರ ನಿಜವಾದ ಕೃಪೆ ಎಂಬುದನ್ನು ನಿಮಗೆ ತಿಳಿಸಬೇಕೆಂಬುದೇ ನನ್ನ ಅಪೇಕ್ಷೆಯಾಗಿತ್ತು. ಆ ಕೃಪೆಯಲ್ಲಿ ಸ್ಥಿರತೆಯಿಂದಿರಿ.
IRVKN {ಕಡೆ ವಂದನೆಗಳು} PS ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು * ಇಬ್ರಿ. 13:22: ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ † 1 ಕೊರಿ 15:1: ನಿಲ್ಲಿರಿ.