Versions
KNV ಅದರ ಅರಸನ ತಲೆಯಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡನು. ಅದು ಬಂಗಾರದ್ದಾಗಿ ಒಂದು ತಲಾಂತಿನ ತೂಕವಾಗಿತ್ತು; ರತ್ನಗಳಿಂದ ಕೆತ್ತಲ್ಪಟ್ಟಿತ್ತು. ಅದು ದಾವೀದನ ತಲೆಯ ಮೇಲೆ ಇರಿಸಲ್ಪಟ್ಟಿತು. ಇದಲ್ಲದೆ ಅವನು ಆ ಪಟ್ಟಣದಿಂದ ಬಹು ಅಧಿಕವಾಗಿ ಕೊಳ್ಳೆಯನ್ನು ತಂದನು.
ERVKN ದಾವೀದನು ಅವರ ರಾಜನ ತಲೆಯ ಮೇಲಿದ್ದ ಕಿರೀಟವನ್ನು ತೆಗೆದುಕೊಂಡನು. ಆ ಕೀರಿಟವು ಚಿನ್ನದ್ದೂ ಎಪ್ಪತ್ತೈದು ಪೌಂಡುಗಳಷ್ಟು ಭಾರವುಳ್ಳದ್ದೂ ಆಗಿತ್ತು. ಆ ಕಿರೀಟದಲ್ಲಿ ಬೆಲೆಬಾಳುವ ರತ್ನಗಳಿದ್ದವು. ಅವರು ಆ ಕೀರಿಟವನ್ನು ದಾವೀದನ ತಲೆಯ ಮೇಲೆ ಇಟ್ಟರು. ದಾವೀದನು ಆ ನಗರದಿಂದ ಅನೇಕ ಬೆಲೆಬಾಳುವ ವಸ್ತುಗಳನ್ನು ತಂದನು.
IRVKN ಇದಲ್ಲದೆ ಅವನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ † ನಾಲ್ಕು ಸಾವಿರ ತೊಲೆ ಸುಮಾರು 34 ಕಿಲೋಗ್ರಾಂ. ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು.