Versions
KNV ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು.
ERVKN ಹದೋರಾಮನು ಬಿಟ್ಟೀಕೆಲಸ ಮಾಡುತ್ತಿದ್ದವರ ಅಧಿಕಾರಿ. ಅವನನ್ನು ರೆಹಬ್ಬಾಮನು ಇಸ್ರೇಲರ ಬಳಿಗೆ ಕಳುಹಿಸಿದನು. ಆದರೆ ಇಸ್ರೇಲರು ಅವನ ಮೇಲೆ ಕಲ್ಲೆಸೆದು ಕೊಂದರು. ಇದನ್ನು ನೋಡಿದ ರೆಹಬ್ಬಾಮನು ಓಡಿಹೋಗಿ ತನ್ನ ರಥವನ್ನು ಏರಿ ಅಲ್ಲಿಂದ ತಪ್ಪಿಸಿಕೊಂಡು ಜೆರುಸಲೇಮಿಗೆ ಬಂದನು.
IRVKN ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದಾಗ, ಅವರು ಅವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿ ಹೋದನು.