Versions
KNV ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
ERVKN ಯೆಹೂದದ ಎಲ್ಲಾ ಜನರು ತಾವು ಯೆಹೋವನಿಗೆ ಮಾಡಿದ ಪ್ರಮಾಣದ ನಿಮಿತ್ತ ಸಂತೋಷಪಟ್ಟರು. ಯಾಕಂದರೆ ಅವರು ತಮ್ಮ ಪೂರ್ಣಹೃದಯದಿಂದ ಪ್ರಮಾಣಮಾಡಿದ್ದರು. ಅವರು ಯೆಹೋವನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸಿದರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಪ್ರಸನ್ನನಾಗಿ ಅವರಿಗೆ ಸಮಾಧಾನವನ್ನು ಕೊಟ್ಟನು.
IRVKN ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.