Versions
KNV ಜನರಿಗೆ ಅದನ್ನು ತಿನ್ನುವದಕ್ಕೆ ಬಡಿಸಿದರು. ಆಹಾರವನ್ನು ತಿನ್ನುತ್ತಿರುವಾಗ ಏನಾಯಿ ತಂದರೆ, ಅವರು--ದೇವರ ಮನುಷ್ಯನೇ, ಗಡಿಗೆಯಲ್ಲಿ ವಿಷ ಎಂದು ಕೂಗಿದರು. ಯಾಕಂದರೆ ಅದರಲ್ಲಿದ್ದದ್ದನ್ನು ಅವರು ತಿನ್ನಲಾರದೆ ಇದ್ದರು.
ERVKN ನಂತರ ಅವರು ಸ್ವಲ್ಪ ಸಾರನ್ನು ಜನರಿಗೆ ತಿನ್ನಲು ಬಡಿಸಿದರು. ಆದರೆ ಅವರು ಆ ಸಾರನ್ನು ಊಟಮಾಡಲಾರಂಭಿಸಿದಾಗ, ಅವರು, “ದೇವಮನುಷ್ಯನೇ! ಪಾತ್ರೆಯಲ್ಲಿ ವಿಷವಿದೆ!” ಎಂದು ಎಲೀಷನನ್ನು ಕೂಗಿಕೊಂಡರು. ಆ ಆಹಾರವು ತಿನ್ನಲು ಯೋಗ್ಯವಾಗಿರಲಿಲ್ಲವಾದುದರಿಂದ ಅವರು ಆ ಪಾತ್ರೆಯಿಂದ ಏನನ್ನೂ ತಿನ್ನಲಿಲ್ಲ.
IRVKN ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು. ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೇವರ ಮನುಷ್ಯನೇ ಪಾತ್ರೆಯಲ್ಲಿ ವಿಷ” ಎಂದು ಕೂಗಿದರು. ಅದನ್ನು ತಿನ್ನಲಾರದೆ ಹೋದರು.