Versions
KNV ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು.
ERVKN ಅವಳು ಅನೇಕ ಪಾತ್ರೆಗಳನ್ನು ತುಂಬಿಸಿಟ್ಟು ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬಾ” ಎಂದಳು. ಆದರೆ ಎಲ್ಲಾ ಪಾತ್ರೆಗಳು ತುಂಬಿಹೋಗಿದ್ದವು. ಅವಳ ಮಕ್ಕಳಲ್ಲಿ ಒಬ್ಬನು, “ಇಲ್ಲಿ ಯಾವ ಪಾತ್ರೆಗಳೂ ಇಲ್ಲ” ಎಂದು ಹೇಳಿದನು. ಆ ಸಮಯಕ್ಕೆ ಸರಿಯಾಗಿ ಪಾತ್ರೆಯಲ್ಲಿದ್ದ ಎಣ್ಣೆಯು ಮುಗಿದಿತ್ತು.
IRVKN ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು” ಎನ್ನಲು ಅವನು, “ಪಾತ್ರೆಗಳೆಲ್ಲ ಮುಗಿದು ಹೋದವು” ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು. PEPS