Versions
KNV ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ ತೈಲವನ್ನು ಹಚ್ಚಿಕೊಂಡ ವನಾಗಿ ಬದಲಿ ವಸ್ತ್ರಗಳನ್ನು ಧರಿಸಿಕೊಂಡು ಕರ್ತನ ಮಂದಿರಕ್ಕೆ ಹೋಗಿ ಆತನನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನು ಕೇಳಿದಾಗ ಅವರು ಅವನ ಮುಂದೆ ಇಟ್ಟ ರೊಟ್ಟಿ ತಿಂದನು.
ERVKN ಆಗ ದಾವೀದನು ನೆಲದಿಂದ ಮೇಲಕ್ಕೆದ್ದನು. ಅವನು ತನ್ನನ್ನು ಶುಚಿಗೊಳಿಸಿಕೊಂಡನು. ಅವನು ತನ್ನ ಬಟ್ಟೆಗಳನ್ನು ಬದಲಿಸಿ ಬೇರೆ ಬಟ್ಟೆಗಳನ್ನು ಧರಿಸಿದನು. ನಂತರ ಅವನು ಯೆಹೋವನನ್ನು ಆರಾಧಿಸುವುದಕ್ಕಾಗಿ ಆತನ ಆಲಯಕ್ಕೆ ಹೋದನು. ಅವನು ಮನೆಗೆ ಹೋಗಿ ತಿನ್ನಲು ಏನನ್ನಾದರೂ ಕೊಡುವಂತೆ ಕೇಳಿದನು. ಅವನ ಸೇವಕರು ಕೊಟ್ಟ ಸ್ವಲ್ಪ ಆಹಾರವನ್ನು ಅವನು ತಿಂದನು.
IRVKN ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.