Versions
KNV ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.
ERVKN ಆದುದರಿಂದ ಯೆಹೋವನು ಹೇಳುವದೇನಂದರೆ, “ಆ ದೇಶಕ್ಕೆ ಒಬ್ಬ ಶತ್ರುವು ಬರುವನು. ಅವನು ನಿಮ್ಮ ಬಲವನ್ನೇ ಮುರಿಯುವನು. ನೀವು ಉನ್ನತ ಬುರುಜುಗಳಲ್ಲಿ ಅಡಿಗಿಸಿಟ್ಟಿದ್ದ ವಸ್ತುಗಳನ್ನು ಕಿತ್ತುಕೊಳ್ಳುವನು.”
IRVKN ಹೀಗಿರಲು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ:
“ಶತ್ರುವು ನಿನ್ನ ದೇಶವನ್ನು ಮುತ್ತಿಕೊಳ್ಳುವನು.
ನಿನ್ನ ಶಕ್ತಿಯನ್ನು ಕುಂದಿಸಿಬಿಡುವನು
ಮತ್ತು ನಿನ್ನ ಅರಮನೆಗಳು ಸೂರೆಯಾಗುವವು.”