Versions
KNV ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
ERVKN ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ.
IRVKN ನೀತಿವಂತರನ್ನು ಹಿಂಸಿಸುವವರೇ,
ಲಂಚತೆಗೆದುಕೊಳ್ಳುವವರೇ,
ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ.
ನಿಮ್ಮ ದ್ರೋಹಗಳು ಬಹಳ,
ನಿಮ್ಮ ಪಾಪಗಳು ನನಗೆ ಗೊತ್ತಿದೆ.