Versions
KNV ಆದದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ.
ERVKN “ಇಸ್ರೇಲ್ ದೇಶದ ವಿಷಯವಾಗಿ ಅವರಿಗೆ ಹೇಳು. ಪರ್ವತ, ಙೆಟ್ಟ, ತಗ್ಗು, ಹೊಳೆಗಳಿಗೆ ಹೇಳು. ಒಡೆಯನಾದ ಯೆಹೋವನು ಇಂತೆನುಐತ್ತಾನೆ ಎಂದು ತಿಳಿಸು. ‘ನೀನು ಆ ದೇಶಗಳವರ ಅವಹೇಳನದ ಮಾತುಗಳನುಐ ಕೇಳಙೇಕಾಯಿತಲ್ಲಾ ಎಂದು ನನಐ ಹೃದಯವು ಸಿಟ್ಟಿನಲ್ಲಿ ಕುದಿಯುತ್ತದೆ.’“
IRVKN ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!’