Versions
KNV ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
ERVKN ನಾನು ಹೋಗಲೇಬೇಕೆಂದು ದೇವರು ನನಗೆ ತಿಳಿಸಿದ್ದರಿಂದ ವಿಶ್ವಾಸಿಗಳ ನಾಯಕರಾದ ಈ ಜನರ ಬಳಿಗೆ ಹೋದೆನು. ನಾವಷ್ಟೇ ಇದ್ದಾಗ, ಯೆಹೂದ್ಯರಲ್ಲದವರಿಗೆ ಸಾರುವ ಸುವಾರ್ತೆಯನ್ನು ಇವರಿಗೆ ತಿಳಿಸಿದೆನು. ನಾನು ಮೊದಲು ಮಾಡಿದ ಸೇವೆ ಮತ್ತು ಈಗ ಮಾಡುತ್ತಿರುವ ಸೇವೆ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಇವರಿಗೆ ಅರ್ಥವಾಗುವಂತೆ ನನ್ನ ಸೇವೆಯ ಬಗ್ಗೆ ತಿಳಿಸಿದೆನು.
IRVKN ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, † 1 ತಿಮೊ. 3:16 ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ‡ ಗಲಾ. 2:6-9 ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು § ಮೂಲ: ಓಡುತ್ತಿರುವುದು ಅಥವಾ ಓಡಿದ್ದು. ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.