Versions
KNV ಸಭೆಯು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ ಆದದ್ದೇನಂದರೆ, ಅವರು ಸಭೆಯ ಗುಡಾರದ ಕಡೆಗೆ ನೋಡಲಾಗಿ ಇಗೋ, ಮೇಘವು ಅದನ್ನು ಮುಚ್ಚಿ ಕೊಂಡು ಕರ್ತನ ಮಹಿಮೆಯು ಕಾಣಬಂತು.
ERVKN ಮೋಶೆ ಆರೋನರನ್ನು ಎದುರಿಸಲು ಜನರು ಒಟ್ಟಾಗಿ ಸೇರಿಬಂದಿದ್ದಾಗ, ದೇವದರ್ಶನಗುಡಾರದ ಕಡೆಗೆ ತಿರುಗಿ ನೋಡಲಾಗಿ, ದೇವದರ್ಶನಗುಡಾರವನ್ನು ಮೋಡ ಮುಚ್ಚಿಕೊಂಡಿರುವುದನ್ನೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಗಿರುವುದನ್ನೂ ಅವರು ಕಂಡರು.
IRVKN ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.