Versions
KNV ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
ERVKN ಆಗ ಆ ದೂತನು ಪಕ್ಕದಲ್ಲಿ ನಿಂತಿದ್ದ ಬೇರೆ ದೂತರನ್ನುದ್ದೇಶಿಸಿ, “ಯೆಹೋಶುವನ ಮೇಲಿರುವ ಮೈಲಿಗೆ ವಸ್ತ್ರವನ್ನು ತೆಗೆಯಿರಿ” ಎಂದು ಹೇಳಿದನು. ಆಗ ದೂತನು ಯೆಹೋಶುವನಿಗೆ, “ನಾನು ನಿನ್ನ ದೋಷಗಳನ್ನು ತೊಳೆದುಬಿಟ್ಟಿರುವೆ. ಈಗ ನಾನು ನಿನಗೆ ಹೊಸ ಬಟ್ಟೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.
IRVKN ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.