Bible Versions
Bible Books

1 Chronicles 5:26 (RV) Revised Version

Versions

KNV   ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್‌ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
ERVKN   ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತಿಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಸ್ಥಳಗಳಲ್ಲಿ ವಾಸಮಾಡುತ್ತಿರುವರು.
IRVKN   ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ಮಾಡಿದ್ದಾನೆ ದೇವರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us