Versions
KNV ಆಗ ಸೌಲನು ತನ್ನ ಬಳಿಯಲ್ಲಿದ್ದ ಜನರಿಗೆ--ನಮ್ಮ ಬಳಿಯಿಂದ ಹೋದವರು ಯಾರೆಂದು ಲೆಕ್ಕವನ್ನು ನೋಡಿರಿ ಅಂದನು. ಅವರು ಲೆಕ್ಕ ನೋಡುವಾಗ ಇಗೋ, ಯೋನಾತಾನನೂ ಅವನ ಆಯುಧಗಳನ್ನು ಹೊರುವವನೂ ಅಲ್ಲಿ ಇರಲಿಲ್ಲ.
ERVKN ಸೌಲನು ತನ್ನೊಡನೆ ಇದ್ದ ಸೈನಿಕರಿಗೆ, “ಪಾಳೆಯದಲ್ಲಿರುವ ಜನರನ್ನು ಲೆಕ್ಕಹಾಕಿ. ಯಾರು ಪಾಳೆಯದಿಂದ ಹೊರಗೆ ಹೋಗಿದ್ದಾರೆ ಎಂಬುದನ್ನು ನಾನು ತಿಳಿಯಬೇಕು” ಎಂದು ಹೇಳಿದನು. ಅವರು ಲೆಕ್ಕಹಾಕಿದಾಗ, ಯೋನಾತಾನನೂ ಅವನ ಸಹಾಯಕನೂ ಹೊರಗೆ ಹೋಗಿರುವುದು ತಿಳಿಯಿತು.