Versions
KNV ಆದರೆ ನನ್ನ ಹೃದಯಕ್ಕೂ ನನ್ನ ಮನಸ್ಸಿಗೂ ಸಮ ರ್ಪಕವಾದ ಹಾಗೆ ಮಾಡುವ ನಂಬಿಕೆಯಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ ಅವನಿಗೆ ಸ್ಥಿರ ವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ನಡೆದುಕೊಳ್ಳುವನು.
ERVKN ನಾನು ನನಗೋಸ್ಕರ ನಂಬಿಗಸ್ತನಾದ ಯಾಜಕನೊಬ್ಬನನ್ನು ಆರಿಸಿಕೊಳ್ಳುತ್ತೇನೆ. ಈ ಯಾಜಕನು ನಾನು ಹೇಳುವುದನ್ನು ಕೇಳುವನು ಮತ್ತು ನನಗೆ ಇಷ್ಟವಾದುದನ್ನು ಮಾಡುವನು. ಈ ಯಾಜಕನ ಕುಟುಂಬವನ್ನು ನಾನು ಬಲಗೊಳಿಸುವೆನು. ನಾನು ಆರಿಸಿಕೊಂಡಿರುವ ರಾಜನ ಬಳಿಯಲ್ಲಿ ಅವನು ಸದಾಕಾಲ ಸೇವೆಮಾಡುವನು.