Versions
KNV ವಿಶ್ವಾಸಿಗಳಾದ ಯಜಮಾನರಿರುವವರು, ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು.
ERVKN ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.