Versions
KNV ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
ERVKN ಯೋರಾವುನು, “ನನ್ನ ರಥವನ್ನು ಸಿದ್ಧಗೊಳಿಸು!” ಎಂದು ಹೇಳಿದನು. ಯೋರಾವುನ ಸೇವಕನು ರಥವನ್ನು ಸಿದ್ಧಗೊಳಿಸಿದನು. ಇಸ್ರೇಲಿನ ರಾಜನಾದ ಯೋರಾವುನು ಮತ್ತು ಯೆಹೂದದ ರಾಜನಾದ ಅಹಜ್ಯನು ಯೇಹುವನ್ನು ಭೇಟಿಮಾಡಲು ತಮ್ಮ ರಥಗಳಲ್ಲಿ ಹೋದರು. ಅವರು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಯೇಹುವನ್ನು ಸಂಧಿಸಿದರು.