Versions
KNV ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
ERVKN ಅಬ್ಷಾಲೋಮನು ದಾವೀದನ ಸೈನಿಕರ ಕೈಗೆ ಸಿಕ್ಕಿಕೊಂಡನು. ಅವನು ಹೇಸರಕತ್ತೆಯ ಮೇಲೆ ಸವಾರಿ ಮಾಡುತ್ತಾ ತಪ್ಪಿಸಿಕೊಳ್ಳಲು ಹೋದನು. ಆ ಹೇಸರಕತ್ತೆಯು ದೊಡ್ಡ ಓಕ್ ಮರದ ರೆಂಬೆಗಳ ಕೆಳಗೆ ಓಡುತ್ತಾ ಹೋಯಿತು. ಆ ರೆಂಬೆಗಳು ದಟ್ಟವಾಗಿದ್ದುದರಿಂದ ಅಬ್ಷಾಲೋಮನ ತಲೆಯು ಮರದಲ್ಲಿ ಸಿಕ್ಕಿಹಾಕಿಕೊಂಡಿತು. ಅವನು ಕುಳಿತುಕೊಂಡಿದ್ದ ಹೇಸರಕತ್ತೆಯು ಓಡಿಹೋದುದರಿಂದ ಅಬ್ಷಾಲೋಮನು ಮರದಲ್ಲಿ ನೇತಾಡುವವನಾದನು.
IRVKN ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.