Versions
KNV ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.
ERVKN ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.