Versions
KNV ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
ERVKN ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯ ದೇಶಗಳ ಮೂಲಕ ಜೆರುಸಲೇಮಿಗೆ ಹೋಗಲು ಯೋಜನೆ ಮಾಡಿದನು. “ನಾನು ಜೆರುಸಲೇಮನ್ನು ಸಂದರ್ಶಿಸಿದ ಮೇಲೆ ರೋಮ್ ನಗರವನ್ನು ಸಹ ಸಂದರ್ಶಿಸಬೇಕು” ಎಂದು ಪೌಲನು ಯೋಚಿಸಿಕೊಂಡನು.
IRVKN ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.