Versions
KNV ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ.
ERVKN ಈ ಒಡಂಬಡಿಕೆಯ ಮೂಲಕ ದೇವರು ನಿಮ್ಮನ್ನು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡುತ್ತಾನೆ. ಆತನು ನಿಮಗೆ ದೇವರಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಹೇಳಿದಂತೆ ನಿಮಗೂ ಹೇಳುತ್ತಾನೆ.