Versions
KNV ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
ERVKN ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು.