Bible Versions
Bible Books

Joshua 8:33 (RV) Revised Version

Versions

KNV   ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಕಡೆಯೂ ಕಡೆಯೂ ಅರ್ಧ ಗೆರಿಜ್ಜೀಮ್‌ ಪರ್ವತದ ಕಡೆಗೂ ಅರ್ಧ ಏಬಾಲ್‌ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.
ERVKN   ಹಿರಿಯರು, ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಇಸ್ರೇಲರೆಲ್ಲರು ಪವಿತ್ರ ಪೆಟ್ಟಿಗೆಯ ಸುತ್ತಲೂ ನಿಂತುಕೊಂಡಿದ್ದರು. ಯೆಹೋವನ ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯನ್ನು ಹೊತ್ತುತಂದ ಲೇವಿಯರ ಎದುರುಗಡೆ ಅವರು ನಿಂತುಕೊಂಡಿದ್ದರು. ಅರ್ಧಜನರು ಏಬಾಲ್ ಬೆಟ್ಟದ ಎದುರಿಗೂ ಮತ್ತು ಇನ್ನುಳಿದ ಅರ್ಧಜನರು ಗೆರಿಜ್ಜೀಮ್ ಬೆಟ್ಟದ ಎದುರಿಗೂ ನಿಂತುಕೊಂಡಿದ್ದರು. ಆಶೀರ್ವಾದವನ್ನು ಹೊಂದಿಕೊಳ್ಳಲು ಹೀಗೆ ಮಾಡಬೇಕೆಂದು ಯೆಹೋವನ ಸೇವಕನಾದ ಮೋಶೆಯು ಜನರಿಗೆ ಹೇಳಿದ್ದನು.
IRVKN   ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us