Versions
KNV ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
ERVKN ಈ ಭಾಗ್ಯವಿರುವುದು ಸುನ್ನತಿ ಮಾಡಿಸಿಕೊಂಡವರಿಗೆ (ಯೆಹೂದ್ಯರಿಗೆ) ಮಾತ್ರವೋ? ಅಥವಾ ಸುನ್ನತಿ ಮಾಡಿಸಿಕೊಂಡಿಲ್ಲದವರಿಗೂ (ಯೆಹೂದ್ಯರಲ್ಲದವರಿಗೂ) ಸಹ ಈ ಭಾಗ್ಯವಿದೆಯೋ? ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿಕೊಂಡನೆಂದು ನಾವು ಆಗಲೇ ಹೇಳಿದ್ದೇವೆ. ಆ ನಂಬಿಕೆಯೇ ಅವನನ್ನು ನೀತಿವಂತನನ್ನಾಗಿ ಮಾಡಿತು.