Versions
KNV ಆಗ ಚೀಯೋನೆಂಬ ದಾವೀದನ ಪಟ್ಟಣ ದೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಅರಸನಾದ ಸೊಲೊ ಮೋನನು ಇಸ್ರಾಯೇಲಿನ ಮಕ್ಕಳಲ್ಲಿ ಶ್ರೇಷ್ಠರಾಗಿರುವ ತಂದೆಗಳಾದ ಇಸ್ರಾಯೇಲಿನ ಹಿರಿಯರನ್ನೂ ಗೋತ್ರ ಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.
ERVKN ರಾಜನಾದ ಸೊಲೊಮೋನನು ಇಸ್ರೇಲಿನ ಹಿರಿಯರೆಲ್ಲರಿಗೆ, ಕುಲಗಳ ಮುಖ್ಯಸ್ಥರಿಗೆ ಮತ್ತು ಇಸ್ರೇಲಿನ ಕುಟುಂಬ ಪ್ರಧಾನರಿಗೆ ಜೆರುಸಲೇಮಿನಲ್ಲಿದ್ದ ತನ್ನ ಬಳಿಗೆ ಬರಬೇಕೆಂದು ತಿಳಿಸಿದನು. ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದ ನಗರದಿಂದ ಆಲಯಕ್ಕೆ ತರುವಾಗ ಅವರು ಸಹ ತನ್ನೊಂದಿಗಿರಬೇಕೆಂಬುದು ಸೊಲೊಮೋನನ ಅಪೇಕ್ಷೆಯಾಗಿತ್ತು.