Versions
KNV ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
ERVKN ಯೆಹೋವನು ಅವರಿಗೆ, ‘ನಿಮ್ಮಲ್ಲಿ ಯಾರಾದರೂ ರಾಜನಾದ ಅಹಾಬನನ್ನು ಪ್ರೇರೇಪಿಸುವಿರಾ? ಅವನು ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ಹೋಗಬೇಕೆಂದು ನಾನು ಅಪೇಕ್ಷೆಪಟ್ಟಿದ್ದೇನೆ. ಅಲ್ಲಿ ಅವನು ಕೊಲ್ಲಲ್ಪಡುವನು’ ಎಂದು ಹೇಳಿದನು. ತಾವು ಏನು ಮಾಡಬೇಕೆಂಬುದರ ಬಗ್ಗೆ ದೂತರಲ್ಲಿ ಒಮ್ಮತದ ಅಭಿಪ್ರಾಯವುಂಟಾಗಲಿಲ್ಲ.
IRVKN ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.