Versions
KNV ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.
ERVKN ಸೊಲೊಮೋನನು, “ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಬಹಳ ದಯಾಪರನಾಗಿದ್ದೆ. ಅವನು ನಿನ್ನನ್ನು ಅನುಸರಿಸಿದನು. ಅವನು ಒಳ್ಳೆಯವನಾಗಿದ್ದು ನೀತಿವಂತನಾಗಿ ಬದುಕಿದನು. ಅವನ ನಂತರ ಅವನ ಮಗನನ್ನು ಅವನ ಸಿಂಹಾಸನದಲ್ಲಿ ಕುಳ್ಳಿರಿಸಿ ಆಳಲು ನೇಮಿಸಿ ನೀನು ಮಹಾಕೃಪೆಯನ್ನು ತೋರಿಸಿದೆ.
IRVKN “ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.