Versions
KNV ನನಗೆ ಅವನು--ದಯಮಾಡಿ ನನಗೆ ಅಪ್ಪಣೆಕೊಡು; ಯಾಕಂದರೆ ಊರೊಳಗೆ ನಮ್ಮ ಕುಟುಂಬದವರು ಯಜ್ಞ ಮಾಡುತ್ತಾರೆ; ನನ್ನ ಸಹೋ ದರನು ನನ್ನನ್ನು ಬರಲು ಹೇಳಿ ಕಳುಹಿಸಿದನು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ನನ್ನ ಸಹೋದರರನ್ನು ನೋಡುವದಕ್ಕೆ ಹೋಗುತ್ತೇನೆ ಅಂದನು. ಆದದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ ಅಂದನು.
ERVKN ‘ನಮ್ಮ ಗೋತ್ರದವರು ಬೇತ್ಲೆಹೇಮಿನಲ್ಲಿ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ನನ್ನ ಸಹೋದರರು ನನಗೂ ಬರಬೇಕೆಂದು ಕೇಳಿಕೊಂಡಿದ್ದಾರೆ. ನೀನು ನನ್ನ ಗೆಳೆಯನಾಗಿರುವುದಾದರೆ ನನ್ನ ಸೋದರರನ್ನು ನೋಡಿಕೊಂಡು ಬರಲು ದಯವಿಟ್ಟು ನನಗೆ ಅವಕಾಶಕೊಡು ಎಂದು ಹೇಳಿದನು.’ ಆದ್ದರಿಂದಲೇ ದಾವೀದನು ರಾಜನ ಊಟದ ಮೇಜಿಗೆ ಬಂದಿಲ್ಲ” ಎಂದು ಉತ್ತರಿಸಿದನು.
IRVKN ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ. ದಯವಿಟ್ಟು ನನಗೆ ಅಪ್ಪಣೆಕೊಡು ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿ ಬರುತ್ತೇನೆ’ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದ್ದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ” ಎಂದು ಉತ್ತರಕೊಟ್ಟನು.