Versions
KNV ನೀನು ಮಾಡಿದ ಈ ಕಾರ್ಯ ಒಳ್ಳೇದಲ್ಲ. ಕರ್ತನ ಜೀವ ದಾಣೆ--ಕರ್ತನ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದರಿಂದ ಮರಣಕ್ಕೆ ನೀವು ಪಾತ್ರರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು ಅಂದನು.
ERVKN ನೀನು ದೊಡ್ಡ ತಪ್ಪನ್ನು ಮಾಡಿದೆ! ಯೆಹೋವನಾಣೆ, ನೀನು ಮತ್ತು ನಿನ್ನ ಜನರು ಸಾಯಲೇಬೇಕಾಗಿತ್ತು. ಏಕೆನ್ನುವಿಯೊ? ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾದ ನಿನ್ನ ಒಡೆಯನನ್ನು ನೀನು ರಕ್ಷಿಸಲಾಗಲಿಲ್ಲ. ಸೌಲನ ತಲೆಯ ಹತ್ತಿರವಿದ್ದ ಭರ್ಜಿ ಮತ್ತು ನೀರಿನ ತಂಬಿಗೆಯನ್ನು ಹುಡುಕಿರಿ, ಅವು ಎಲ್ಲಿಗೆ ಹೋದವು?” ಎಂದು ಕೇಳಿದನು.
IRVKN ನೀನು ಹೀಗೆ ಮಾಡುವುದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು” ಎಂದು ಕೂಗಿ ಹೇಳಿದನು.