Versions
KNV ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
ERVKN ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.
IRVKN ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.