Versions
KNV ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲು ಗೊಂಡು ಗತ್ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು. ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು. ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು.
ERVKN ಫಿಲಿಷ್ಟಿಯರು ಎಕ್ರೋನ್ನಿಂದ ಗತ್ವರೆಗಿನ ಪ್ರದೇಶದ ಇಸ್ರೇಲ್ ಪಟ್ಟಣಗಳನ್ನು ವಶಪಡಿಸಿಕೊಂಡಿದ್ದರು. ಆದರೆ ಇಸ್ರೇಲರು ಆ ಪಟ್ಟಣಗಳನ್ನು ಮರಳಿ ಗೆದ್ದುಕೊಂಡರು ಮತ್ತು ಆ ಪಟ್ಟಣದ ಸುತ್ತಲಿನ ಪ್ರದೇಶಗಳನ್ನು ವಶಪಡಿಸಿಕೊಂಡರು. ಇಸ್ರೇಲರ ಮತ್ತು ಅಮೋರಿಯರ ಮಧ್ಯೆ ಶಾಂತಿ ನೆಲೆಸಿತ್ತು.
IRVKN ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನ ವರೆಗೆ ಇಸ್ರಾಯೇಲರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು. PEPS